ಜಾರಕಿಹೊಳಿ ಮತ್ತು ಹುಕ್ಕೇರಿ ವಿರುದ್ದ ಅಸಮಾಧಾನ ಹೊರಹಾಕಿದ ಕಾರ್ಯಕರ್ತರು

ಒಟ್ಟು ವೀಕ್ಷಣೆಗಳು : 2,171
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಚಿಕ್ಕೋಡಿ: ಕಾಂಗ್ರೆಸ್ ಕಾರ್ಯಕ್ರಮದಲ್ಲೆ ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಭಟನೆ ನಡೆಸಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಂಸದ ಪ್ರಕಾಶ ಹುಕ್ಕೇರಿ ವಿರುದ್ದ ಘೋಷಣೆ ಕೂಗಿ ಕಾರ್ಯಕರ್ತರು ತಮ್ಮ ಅಸಮಾಧಾನ ಹೊರಹಾಕಿದರು. 

ಹುಕ್ಕೇರಿಯ ರವದಿ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ಚಿಕ್ಕೋಡಿ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಪರ ಪ್ರಚರಾರ್ಥ ಸಭೆಯಲ್ಲಿ ಹುಕ್ಕೇರಿ ವಿರುದ್ದ ವಾಗ್ದಾಳಿ ನಡೆಸಿದ ಕಾರ್ಯಕರ್ತರು ಕಳೆದ 5 ವರ್ಷದಿಂದ ತಾವು ಎಷ್ಟು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದೀರಿ. ಒಮ್ಮೆಯೂ ಬಾರದ ನಿಮಗೆ ನಾವು ಯಾಕೆ ಮತ ಹಾಕಬೇಕು. ನಾವು ನಿಮ್ಮ ಪರ ಪ್ರಚಾರ ಮಾಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು. ಈ ಘಟನೆಯಿಂದ ಚುಣಾವಣಾ ಪ್ರಚಾರಕ್ಕೆ ಹೋಗಿದ್ದ ಸತೀಶ್ ಜಾರಕಿಹೊಳಿ ಮತ್ತು ಪ್ರಕಾಶ ಹುಕ್ಕೇರಿಗೆ ತೀವ್ರ ಮುಖಭಂಗವಾಯಿತು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು