ಮೈತ್ರಿ ಸರ್ಕಾರಕ್ಕೆ ನನ್ನಿಂದ ಧಕ್ಕೆಯಾಗುವುದಿಲ್ಲ ಎಂಬ ಭರವಸೆ ನೀಡಿದ ರಮೇಶ ಜಾರಕಿಹೊಳಿ

ಒಟ್ಟು ವೀಕ್ಷಣೆಗಳು : 243
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್


ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮೈತ್ರಿ ಸರ್ಕಾರಕ್ಕೆ ನನ್ನಿಂದ ಯಾವುದೇ ತೊಂದರೆ ಯಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಮತದಾನ ಮುಗಿದ ಬಳಿಕ ರಾಜೀನಾಮೆ ನೀಡುವ ಬಗ್ಗೆ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದು ಮಯತ್ರಿ ಸರ್ಕಾರಕ್ಕೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ ರಮೇಶ ಬೆಂಬಲಕ್ಕೆ ಯಾವ ಶಾಸಕರೂ ನಿಲ್ಲಲಿಲ್ಲ ಎಂಬ ಮಾತುಗಳು ಕೇಳುತ್ತಿದ್ದು, ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಯಾವುದೇ ನಿರ್ಧಾರ ತೆಗೆದುಕೊಳ್ಳಯ ಮುನ್ನ ತಮಗೆ ತಿಳಿಸಲಾಗುವುದು ಎಂದು ಹೇಳಿ ನನ್ನಿಂದ ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಮೈತ್ರಿ ಸರ್ಕಾರಕ್ಕೆ ತೊಂದರೆ ಕೋಡುವ ಉದ್ದೇಶ ನನ್ನದಲ್ಲ, ನಿಮ್ಮ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಪಕ್ಷದ ಆಂತರಿಕ ಸಮಸ್ಯೆಯಿಂದಾಗಿ ಅಸಮಾದಾನವಿದೆ ಎಂದು ಮುಖ್ಯಮಂತ್ರಿಯವರಗೆ ತಿಳಿಸಿದರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈ ನಡುವೆ ಬಿಜೆಪಿ ಆಫರೇಶನ್ ಕಮಲವನ್ನು ತಡೆ ಹಿಡಿದಿದ್ದು, ಕಾದು ನೋಡುವ ತಂತ್ರಕ್ಕೆ ಶರಣಾಗಿದೆ. ಇನ್ನೋಂದೆಡೆ ರಮೇಶ ಬೆಂಬಲಕ್ಕೆ ಯಾರೂ ಇಲ್ಲದಂತಾಗಿ ಈ ನಡೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಒಟ್ಟಿನಲ್ಲಿ ಈ ಎಲ್ಲದಕ್ಕೂ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸ್ಪಷ್ಟ ಚಿತ್ರಣ ಕಂಡುಬರಲಿದೆ..

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು