370 ಕಲಂ ರದ್ದು: ಕೇಂದ್ರದ ಐತಿಹಾಸಿಕ ನಿರ್ಣಯಕ್ಕೆ ಸಂಭ್ರಮ

ಒಟ್ಟು ವೀಕ್ಷಣೆಗಳು : 58
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೀದರ/ಕೊಪ್ಪಳ: ಕೇಂದ್ರ ಸರ್ಕಾರ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಲು ತೀರ್ಮಾನವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ವಿವಿದೆಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಗಡಿಯಾರ ಕಂಬದಲ್ಲಿ ಜಮ್ಮು ಮತ್ತು ಕಾಶ್ಮೀರ ಭಾರತ ಮಾತೆಯ ಸಿಂಧೂರ ಎಂದು ಘೋಷಣೆ ಕೂಗಿ ಸಂಭ್ರಮಪಟ್ಟರೆ. ಬೀದರನ ಭಗತ್ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು, ವಿವಿಧ ಸಂಘಟನೆಗಳು ಹಾಗೂ ಶ್ರೀರಾಮ್ ಸೇನೆಯಿಂದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಜಿಲ್ಲಾ ಕಬ್ಬು ಬೆಳೆಗಾರ ಪ್ರಕೋಷ್ಟದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ನೇತೃತ್ವದಲ್ಲಿ ಪಟ್ಟಣದ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು