ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮನ

ಒಟ್ಟು ವೀಕ್ಷಣೆಗಳು : 261
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಸಾವು-ನೋವು, ಬೆಳೆಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸಿಎಂ ಅವರಿಗೆ ವಿವರಿಸಿದ್ದಾರೆ. ಜನರನ್ನು ಸುರಕ್ಷಿತ ಸ್ಥಳಾಂತರಿಸುವ ಕುರಿತು ಹಾಗೂ ಮಳೆಯ ಪ್ರಮಾಣ, ಹವಾಮಾನ ವರದಿಯ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆದುಕೊಂಡಿದ್ದಾರೆ.

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ.  ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಮಾನ ನಿಲ್ದಾಣದಲ್ಲಿಯೇ ಮಾಹಿತಿ ಪಡೆದುಕೊಂಡರು. ಮಳೆಯಿಂದ ಉಂಟಾದ ಸಾವು-ನೋವು, ಬೆಳೆಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರು ವಿವರಿಸಿದರು. ಜನರನ್ನು ಸುರಕ್ಷಿತ ಸ್ಥಳಾಂತರಿಸುವ ಕುರಿತು ಹಾಗೂ ಮಳೆಯ ಪ್ರಮಾಣ, ಹವಾಮಾನ ವರದಿಯ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರಿಗೆ ಶಾಸಕರಾದ ಉಮೇಶ್ ಕತ್ತಿ, ಅನಿಲ್ ಬೆನಕೆ, ಅಭಯ್ ಪಾಟೀಲ ಮತ್ತಿತರರು ಸಾತ ನೀಡಿದ್ದಾರೆ.  ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತ ಸಿಇಓ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು