ಸಂತ್ರಸ್ತರ ನೆರವಿಗೆ ಧಾವಿಸಿದ NSUI ತಂಡ

ಒಟ್ಟು ವೀಕ್ಷಣೆಗಳು : 615
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಳಗಾವಿ: ಉತ್ತರ ಕರ್ನಾಟಕದ ನಾನಾ ಕಡೆ ಪ್ರವಾಹವುಂಟಾಗಿದ್ದ ಕಾರಣ ತಾಲೂಕಿನ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ನಿರಾಶ್ರಿತರಿಗೆ ಬೆಳಗಾವಿ ಗ್ರಾಮೀಣ ಸೇರಿದಂತೆ ವಿವಿದೆಡೆ NSUI ತಂಡ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಉಪಾಧ್ಯಕ್ಷ ಕಿರಣಗೌಡ ಪಾಟೀಲ್ ಪ್ರವಾಹ ಉಂಟಾದ ದಿನದಿಂದಲೂ ನಮ್ಮ ತಂಡದ ಪ್ರತಿಯೊಬ್ಬ ಸದಸ್ಯರು ವಿಶ್ರಾಂತಿ ಬಯಸದೆ ನಿಸ್ವಾರ್ಥತೆ ಕೆಲಸ ಮಾಡುತ್ತಿದ್ದೇವೆ. ಇದು ಪ್ರಕೃತಿ ವಿಕೋಪ, ಯಾರು ಜವಾಬ್ದಾರರಲ್ಲ. ನಮ್ಮ ಕೈಲಾದಷ್ಟು ನಾವು ಸಹಾಯ ಮಾಡಿದ್ದೇವೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ, ಆಸ್ತಿ, ಪಾಸ್ತಿ, ಮನೆ ಮಠಗಳನ್ನು ಕಳೆದುಕೊಂಡು ಸೂರು ಇಲ್ಲದೆ ಜನರು ಪರದಾಡುವಂತಾಗಿದೆ ಎಲ್ಲರು ಮುಂದೆ ಸಂತ್ರಸ್ತರಿಗೆ ನೆರವಾಗಬೇಕು ಎಂದು ಜನರಲ್ಲಿ ವಿನಂತಿಸಿಕೊಡಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸಂಗನಗೌಡ ಪಾಟೀಲ್, ವಿಕ್ರಮ್ ಕೋಲಕಾರ, ವರುಣ ಶೆಗಾವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು