ಸಚಿವರ ಖಾತೆ ಹಂಚಿಕೆಗೆ ಸದ್ಯಕ್ಕೆ ಬ್ರೇಕ್

ಒಟ್ಟು ವೀಕ್ಷಣೆಗಳು : 158
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಂಗಳೂರು: ಮಂಗಳವಾರ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿ ಸರ್ಕಾರದ ಹದಿನೇಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಅವರಿಗೆ ಖಾತೆಯನ್ನು ಮಾತ್ರ ನಿಗದಿಪಡಿಸಿರಲಿಲ್ಲ. ಕೆಲವು ಬಿಜೆಪಿ ನಾಯಕರು ಗೃಹ ಖಾತೆ ಸೇರಿದಂತೆ ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಸಂಬಂದ ಇಂದು ಖಾತೆ ಹಂಚಿಕೆ ಬಹುತೇಕ ಅಂತಿಮವಾಗುವ ಸಾಧ್ಯತೆ ಇತ್ತು. ಆದರೆ, ಅರುಣ್ ಜೇಟ್ಲಿ ಅಗಲಿಕೆಯಿಂದ ಈ ಪ್ರಕ್ರಿಯೆ ತಾತ್ಕಾಲಿಕವಾಗಿ ಎರಡು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರಿಗೆ ಅಂತಿಮ ನಮನ ಸಲ್ಲಿಸುವ ಸಲುವಾಗಿ ಸಿಎಂ ಬಿ.ಎಸ್.ವೈ ನಾಳೆ ಮುಂಜಾನೆ ದೆಹಲಿಗೆ ತೆರಳಲಿದ್ದಾರೆ. ಅಂತ್ಯಕ್ರಿಯೆ ಮುಗಿದ ನಂತರ ಸಂಜೆಯೇ ರಾಜ್ಯಕ್ಕೆ ಮರಳಲಿದ್ದಾರೆ. ಹೀಗಾಗಿ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಸೋಮವಾರಕ್ಕೆ ಮುಂದೂಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು