ರಾತ್ರೋರಾತ್ರಿ ಪ್ರತಿಭಟಿಸಿದ ಡಿಕೆಶಿ ಅಭಿಮಾನಿಗಳು

ಒಟ್ಟು ವೀಕ್ಷಣೆಗಳು : 45
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ರಾಯಚೂರು: ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅರೆಸ್ಟ್ ಆದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಭಟನೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಡಿಕೆಶಿ ಬಂಧನ ಸುದ್ದಿ ತಿಳಿಯುತ್ತಿದ್ದಂತೆ ನಗರದ ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ ಅಭಿಮಾನಿಗಳು ವಿಚಾರಣೆಗೆ ಸಹಕರಿಸಲಿಲ್ಲ ಅಂತಾ ಇ.ಡಿ.ಅಧಿಕಾರಿಗಳು ಡಿಕೆಶಿ ಬಂಧಿಸಿದ್ದು ಇದು ಖಂಡನೀಯ ಎಂದು ಮೋದಿ ಮತ್ತು ಅಮಿತ್ ಶಾ ವಿರುದ್ಧ ದಿಕ್ಕಾರ ಕೂಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು